ಗಾಂಜಾ ಮಾರುತ್ತಿದ್ದವನ ಬಂಧನ 7 ಕೆಜಿ ಗಾಂಜಾ ವಶ !17-06-2017 271

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿ, 7 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಒರಿಸ್ಸಾ ಮೂಲದ ನೀಲಕಂಠ ಪಲ್ಲೈ (42), ವಿಲ್ಸನ್ ಗಾರ್ಡನ್‍ನ ನಿಜಾಮುದ್ದೀನ್ (30) ಬಂಧಿತ ಆರೋಪಿಗಳಾಗಿದ್ದಾರೆ, ವೈಟ್ ಫೀಲ್ಡ್ ಸಮೀಪದ ನಾಗೊಂಡನಹಳ್ಳಿಯಲ್ಲಿ ಆಟೋರಿಕ್ಷಾದಲ್ಲಿ 7 ಕೆಜಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ವೈಟ್ ಫೀಲ್ಡ್ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮತ್ತಷ್ಟು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ ಎಂದು ಡಿಸಿಪಿ ನಾರಾಯಣ್ ಅವರು ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ