ರಾಯಣ್ಣ ಬ್ರಿಗೇಡ್ ಗೆ ಕೈ ಹಾಕಿದ ಸಿದ್ದು !12-10-2017 653

ಬೆಂಗಳೂರು: ಬಿಜೆಪಿ ನಾಯಕ ಈಶ್ವರಪ್ಪ ಸಂಘಟಿಸಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸೆಳೆಯಲು ಸಿದ್ದರಾಮಯ್ಯ ತಂತ್ರ ಹೂಡಿದ್ದಾರೆ. ಈ ಸಂಬಂಧ ಈಗಾಗಲೇ ಬ್ರಿಗೇಡ್ ನಾಯಕರ ಜೊತೆ ಮಾತುಕತೆ ನಡೆಸಿರುವ ಸಿದ್ದರಾಮಯ್ಯ ಕಾಂಗ್ರೆಸ್ ಬೆಂಬಲಿಸುವಂತೆ ಹಿಂದುಳಿದ ನಾಯಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಬ್ರಿಗೇಡ್ ನಾಯಕರನ್ನು ಸೆಳೆಯಲು ಮುಂದಾಗಿರುವ ಸಿಎಂ ಬ್ರಿಗೇಡ್ ಚಟುವಟಿಕೆ ಸ್ಥಗಿತವಾಗಿರೋದ್ರಿಂದ ಕಾಂಗ್ರೆಸ್ ಗೆ ಬನ್ನಿ, ರಾಜಕೀಯವಾಗಿ ಸೂಕ್ತ ಸ್ಥಾನಮಾನ ಮತ್ತು ಕೆಲವರಿಗೆ ಟಿಕೇಟ್ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ ಮಾತುಕತೆ ನಡೆಸಿರುವುದನ್ನು ಒಪ್ಪಿಕೊಂಡಿರುವ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಈಶ್ವರಪ್ಪ ಜೊತೆ ಮಾತುಕತೆ ಮಾಡಿದ ಬಳಿಕವೇ ಮುಂದಿನ ತೀರ್ಮಾನ ಮಾಡಲಿದ್ದೇವೆ ಎಂದಿದ್ದಾರೆ. ಈ ನಡುವೆ ನಾಳೆ ಬೆಂಗಳೂರಿನಲ್ಲಿ ಬ್ರಿಗೇಡ್ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಆಹ್ವಾನ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.


ಒಂದು ಕಮೆಂಟನ್ನು ಬಿಡಿ