ಬಿಜೆಪಿ ಶಾಸಕನಿಗೆ ನಿರೀಕ್ಷಣಾ ಜಾಮೀನು11-11-2017 182

ಬೆಳಗಾವಿ: ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಸಂಜಯ ಪಾಟೀಲ ಅವರಿಗೆ, ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಭಾಷಣ ಮಾಡಿದ್ದರು. ಇದು ಕಾಂಗ್ರೆಸಿಗರನ್ನು ಕೆರಳಿಸಿತ್ತು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೇರಿದಂತೆ ಇತರೆ ಮುಖಂಡರು ಈ ಬಗ್ಗೆ ಮಾರ್ಕೆಟ್ ಠಾಣೆ ಪೊಲೀಸರಿಗೆ ದೂರು ನೀಡಿ ಶಾಸಕರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಇದರ ನಡುವೆ ಸಂಜಯ್ ಪಾಟೀಲ್ ಅವರು ಸಮಜಾಯಿಷಿ ನೀಡಿದರಾದರೂ, ನಿನ್ನೆ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಅವರ ಪರ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಲಭಿಸಿದೆ ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Belagavi District Court ಕೆಪಿಸಿಸಿ ಅವಹೇಳನ