ತಾಯಿ-ಮಗು ಅನುಮಾನಾಸ್ಪದ ಸಾವು

24-11-2017 220
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಮತ್ತು ಮಗು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಡೆದಿದೆ. ತಾಯಿ ರಜನಿ (25) ಮತ್ತು 11 ತಿಂಗಳ ಮಗು ಮೃತ ದುರ್ದೈವಿ ಗಳು. ಬೆಂಗಳೂರು ಉತ್ತರ ತಾಲ್ಲೂಕಿನ ಚನ್ನಸಂದ್ರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ರಜನಿ ಮೂಲತಃ ಚಿಕ್ಕಬಳ್ಳಾಪುರ ತಾಲ್ಲೂಕಿನ ಕಡಶೀಗೆನ ಹಳ್ಳಿ ನಿವಾಸಿಯಾಗಿದ್ದು, ಕಳೆದ ಎರಡು ವರ್ಷಗಳ ಹಿಂದಷ್ಟೇ ಆನಂದ್ ಗೌಡ ಎಂಬುವರೊಂದಿಗೆ ವಿವಾಹವಾಗಿತ್ತು. ಇನ್ನು ಈ ಕುರಿತಂತೆ, ರಜನಿ ಪೋಷಕರು ಆಕೆ ಪತಿ ಅನಂದ್ ಗೌಡನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಜಾನುಕುಂಟೆ ಪೋಲಿಸರು ಭೇಟಿ ನೀಡಿ, ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಬಿಡಿ