ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ24-11-2017 238

ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಂಘಟನಾ ಉಸ್ತುವಾರಿ ಪಿ.ಮುರಳೀಧರ ರಾವ್, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿಯ ಉಳಿದೆಲ್ಲ ಸದಸ್ಯರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನವಕರ್ನಾಟಕ ಪರಿವರ್ತನಾ ಯಾತ್ರೆಯ ಕುರಿತು ಸಭೆಯಲ್ಲಿ ಪರಾಮರ್ಶೆ ಮತ್ತು ಮುಂಬರುವ ಚುನಾವಣೆಯಲ್ಲಿ ಪರಿವರ್ತನಾ ಯಾತ್ರೆಯ ಪರಿಣಾಮ ಎಷ್ಟರ ಮಟ್ಟಿಗೆ ಆಗಲಿದೆ ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ. ಡಿಸೆಂಬರ್ 21 ರಂದು ಹುಬ್ಬಳ್ಳಿಯಲ್ಲಿ ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯಲಿದ್ದು, ಸಮಾವೇಶವನ್ನು ಯಶಸ್ವಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಬೆಂಗಳೂರಿನ ಉದ್ಘಾಟನಾ ಸಮಾವೇಶದ ವೈಫಲ್ಯಗಳಿಂದ ಪಾಠ ಕಲಿತ ಬಿಜೆಪಿ ನಾಯಕರು, ಹುಬ್ಬಳ್ಳಿ ಸಮಾವೇಶವನ್ನು ಯಾರೊಬ್ಬರ ಉಸ್ತುವಾರಿಗೂ ನೀಡದಿರುವ ಬಗ್ಗೆ ಮತ್ತು ಪಕ್ಷದ ವತಿಯಿಂದ ಸಾಮೂಹಿಕ ಹೊಣೆಗಾರಿಕೆಯಲ್ಲಿ ಹುಬ್ಬಳ್ಳಿ ಸಮಾವೇಶ ನಡೆಸುವ ಯೋಚನೆಯಲ್ಲಿದೆ. ಸಮಾವೇಶಕ್ಕೆ ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಪ್ಲಾನ್ ಮಾಡುತ್ತಿದೆ. ಹುಬ್ಬಳ್ಳಿ ಸಮಾವೇಶಕ್ಕೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸಲಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

BJP core committee prakash javdekar ಸಮಾವೇಶ ಕೋರ್ ಕಮಿಟಿ