ಕೊಪ್ಪಳ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ22-12-2017 512

ಕೊಪ್ಪಳ: ಕೊಪ್ಪಳ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲೆಯಲ್ಲಿ ನಡೆದ ಪರಿವರ್ತನಾ ಯಾತ್ರೆ ಬಳಿಕ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದ ಅಭ್ಯರ್ಥಿ ಘೋಷಣೆ ಮಾಡಿರೋದಕ್ಕೆ ಆಕಾಂಕ್ಷಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳ 15ರಂದು ಕೊಪ್ಪಳದ ಕಾರಟಗಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ, ಕೊಪ್ಪಳದ ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಬಸವರಾಜ ದಢೇಸ್ಗೂರು ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. ಆದರೆ ಅದೇ ಕ್ಷೇತ್ರದ ಮತ್ತೋರ್ವ ಆಕಾಂಕ್ಷಿಯಾದ ಮುಕ್ಕುಂದರಾವ್ ಭವಾನಿಮಠ ಅವರು ಅಭ್ಯರ್ಥಿ ಘೋಷಣೆಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಯಡಿಯೂರಪ್ಪರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅವರ ನಾಯಕತ್ವವನ್ನೇ ಪ್ರಶ್ನಿಸಿದ್ದಾರೆ ಭವಾನಿಮಠ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

B.S.yeddyurappa President ಕನಕಗಿರಿ ಅಭ್ಯರ್ಥಿ