ಪಾಲಿಕೆ ಸದಸ್ಯನ ಮನೆಯಲ್ಲಿ ಕಳ್ಳತನ27-12-2017 239

ಬೆಳಗಾವಿ: ಬೆಳಗಾವಿ‌ ಮಹಾನಗರ ಪಾಲಿಕೆ ಸದಸ್ಯ ಭರಮಗೌಡ ಪಾಟೀಲ್‌ ಮನೆಯಲ್ಲಿ ದರೋಡೆ ನಡೆದಿದೆ. ಬೆಳಗಾವಿಯ ಶಿವಬಸವ ನಗರದಲ್ಲಿನ ಮನೆಯಲ್ಲಿ ಕಳ್ಳರು ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ ಒಂಟಿ ಮಹಿಳೆ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ದರೋಡೆ ನಡೆಸಿದ್ದಾರೆ. ಮೂವರು ದರೋಡೆಕೋರರ ತಂಡ ಈ ಕೃತ್ಯ ಎಸಗಿದೆ ಎಂದು ತಿಳಿದು ಬಂದಿದ್ದು, ಮೊಬೈಲ್‌ ಸಹಿತ, ಒಂದು ಲಕ್ಷ ರೂ. ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Mahanagara Palike Robbery ಚಿನ್ನಾಭರಣ ದರೋಡೆ