ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ03-01-2018 396

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಸಿದ್ದು, 2016-17ನೇ ಸಾಲಿನ ಪದವಿ ಹಾಗು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿದರು.  ಈ ಸಮಾರಂಭದಲ್ಲಿ ಸಚಿವರಾದ ಬಸವರಾಜ‌ ರಾಯರೆಡ್ಡಿ, ಕೆ.ಜೆ.ಜಾರ್ಜ್,ರೋಷನ್ ಬೇಗ್, ಎಚ್.ಆಂಜನೇಯ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕ ಸುಧಾಕರ್, ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಭಾಷಣ ಶುರುಮಾಡುತ್ತಿದ್ದಂತೆ ವಿದ್ಯಾರ್ಥಿಗಳು ಸಿಳ್ಳೆ ಕೇಕೆ ಹಾಕಿದರು. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ 31,742 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತಿದೆ, ಇತರೆ 1.5 ಲಕ್ಷ ವಿದ್ಯಾರ್ಥಿಗಳಿಗೆ ಕೂಡ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಬಡವರ್ಗದ ಮಕ್ಕಳಿಗೆ ಅನುಕೂಲ ಆಗಲಿ ಎಂದು ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ನಮ್ಮ ಸರ್ಕಾರದ ಬಜೆಟ್‌ ನಲ್ಲಿ ಘೋಷಣೆ ಮಾಡಿದ್ವಿ, ಅದರಂತೆ ಮಕ್ಕಳಿಗೀಗ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದರು. ಲ್ಯಾಪ್ ಟಾಪ್ ವಿತರಣೆಯಿಂದ ವಿದ್ಯಾರ್ಥಿಗಳಿಗೆ ಖುಷಿ‌ಯಾಗಿದೆ, ಲ್ಯಾಪ್ ಟಾಪ್ ಸೌಲಭ್ಯ ಪಡೆದ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಬೇಕು, ಜ್ಞಾನ ಮತ್ತು ಪ್ರತಿಭೆ ಯಾರ ಸ್ವತ್ತು ಅಲ್ಲ, ನೀವು ಭವಿಷ್ಯದ ಉತ್ತಮ ಪ್ರಜೆಗಳಾಗಬೇಕು ಅನ್ನೋದು ನನ್ನ ಆಸೆ, ನೀವೆಲ್ಲರೂ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿಎಂ ಮಕ್ಕಳಿಗೆ ಬುದ್ದಿ ಮಾತು ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramaiah lap top ರೋಷನ್ ಬೇಗ್ ವಿದ್ಯಾರ್ಥಿ