ತೆಲುಗು ಚಿತ್ರರಂಗದ ಹಿರಿಯ ನಿರ್ಮಾಪಕ ದಾಸರಿ ನಾರಾಯಣ ರಾವ್ ನಿಧನ !31-05-2017 279

ಹೈದರಾಬಾದ್:- ತೆಲುಗು ಚಿತ್ರರಂಗದ ಪ್ರಮುಖ ನಿರ್ಮಾಪಕ ದಾಸರಿ ನಾರಾಯಣ ರಾವ್ ನಿಧನರಾಗಿದ್ದಾರೆ. ಮೂತ್ರ ಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯದ ಕಾರಣ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಗೆ ಪಡೆಯುತ್ತಿದ್ದರು. ಇದೇ ತಿಂಗಳ 17 ರಂದು ಎರಡನೆ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು, ಅಲ್ಲದೆ  ಮೂರು ದಿನಗಳ ಹಿಂದೆಯೇ ಅವರಿಗೆ ಸರ್ಜರಿ ಮಾಡಲಾಗಿತ್ತು, ಅಧಿಕವಾದ ರಕ್ತದೊತ್ತಡ ಕಾಣಿಸಿಕೊಂಡಿದ್ದು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ನಿರ್ದೇಶಕರಾಗಿ,ನಿರ್ಮಾಪಕರಾಗಿ, ನಟರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅಲ್ಲದೆ ತೆಲುಗು ಸಿನಿಮಾರಂಗಲ್ಲಿ ಅನೇಕ ಸಿನಿಮಾಗಳನ್ನು ನಿರ್ದೇಶಿಸಿ ಹಲವು ಪುರಸ್ಕಾರಗಳನ್ನು ಹೊಂದಿದ್ದಾರೆ. ಇವರ ನಿಧನಕ್ಕೆ ತೆಲುಗು ಚಿತ್ರರಂಗ ಶೋಕದಲ್ಲಿ ಮುಳುಗಿದೆ, ದಾಸರಿ ಅವರ ನಿಧನಕ್ಕೆ  ಅನೇಕ ಸಿನಿ ನಟರು ಶೋಕ ವ್ಯಕ್ತಪಡಿಸಿದ್ದಾರೆ.