ಜಾತಿ ಗಣತಿಯ ವರದಿ ನಂತರ ಮೀಸಲಾತಿ ಹೆಚ್ಚಿಸುವ ಬಗ್ಗೆ ಚಿಂತನೆ !



05-06-2017 210

ಮೈಸೂರು:-  ಜಾತಿ ಗಣತಿಯ ವರದಿ ಬಂದ ನಂತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹೇಳಿದ್ದಾರೆ. ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿದೆ. ಈ ಸಮೀಕ್ಷೆಯ ವರದಿ ಬಂದ ನಂತರ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ. 50ಕ್ಕೆ ಹೆಚ್ಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನವರು ಸಿಎಂ ಆಗುವ ಕನಸಿನಲ್ಲಿ ಏನೇನೋ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಅವರಿಗೆ ಮುಖ್ಯಮಂತ್ರಿಯಾಗಬೇಕೆಂಬ ಕನಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ವಿನಾಕಾರಣ ಕಾಂಗ್ರಸ್ ವಿರುದ್ಧ ಆರೋಪ ಮಾಡುತ್ತಲೇ ಇದ್ದಾರೆ. ದಲಿತರ ಮನೆಯಲ್ಲಿ ಊಟ ಮಾಡುವ ಬೂಟಾಟಿಕೆ ನಡೆಸಿದ್ದಾರೆ. ರೈತರ ಸಾಲ ಮನ್ನಾ ಮಾಡಿ ಎಂದು ಬೊಬ್ಬಿಡುವುದೇ ಇವರ ಕೆಲಸವಾಗಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ಹರಿಹಾಯ್ದರು.