ಸಂಪುಟ ವಿಸ್ತರಣೆ ಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ !06-06-2017 183

ಬೆಂಗಳೂರು:-  ಅಧಿವೇಶನ ಬಳಿಕ ಮತ್ತೆ ಸಂಪುಟ ವಿಸ್ತರಣೆ ಆಗುವುದು ಖಚಿತವಾಗಿದೆ. ಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದಂತೆ, ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಜೂನ್ ೧೮ ರಿಂದ ೨೦ ರ ಒಳಗೆ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದೆ. ಮಳೆಗಾಲದ ಅಧಿವೇಶನ ಮುಗಿದ ತಕ್ಷಣವೇ ಸಂಪುಟ ವಿಸ್ತರಣೆಗೆ ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಂಪುಟದಲ್ಲಿ ಮೂರು ಸ್ಥಾನಗಳು ಖಾಲಿ ಉಳಿದಿವೆ. ದಿವಂಗತ ಮಹದೇವ್ ಪ್ರಸಾದ್, ಹೆಚ್ ವೈ ಮೇಟಿ ಹಾಗೂ ಜಿ ಪರಮೇಶ್ವರರಿಂದ ತೆರವಾಗಿವೆ. ದಲಿತ, ಕುರುಬ, ಒಕ್ಕಲಿಗ ಶಾಸಕರಿಗೆ ಸಚಿವ ಸ್ಥಾನ ನೀಡಲು ಸಿಎಂ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಅದರಲ್ಲೂ, ಕುರುಬ ಕೋಟಾದಲ್ಲಿ ಮತ್ತೆ ಮೇಟಿಗೆ ಮಣೆ ಹಾಕೋ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ. ಇನ್ನು, ದಲಿತ ಕೋಟಾದಲ್ಲಿ ಸ್ಪರ್ಧೆ ಹೆಚ್ಚಾಗಿದೆ. ಶಾಸಕರಾದ ಆರ್ ಬಿ ತಿಮ್ಮಾಪುರ, ನರೇಂದ್ರಸ್ವಾಮಿ, ಮೋಟಮ್ಮ ಹಾಗೂ ಶಿವರಾಜ ತಂಗಡಗಿ ನಡುವೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ಬಳಿ ಈ ವಿಚಾರವನ್ನೂ ಚರ್ಚಿಸಿರುವ ತಂಗಡಗಿ, ನನಗೇ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಲಿಂಗಾಯತ ಕೋಟಾದಲ್ಲಿ ತಿಪಟೂರು ಶಾಸಕ ಷಡಕ್ಷರಿ ಮತ್ತು ಮಹದೇವಪ್ರಸಾದ್ ಪತ್ನಿ ಗೀತಾ ಮಹದೇವ ಪ್ರಸಾದ್ ರೇಸ್​​'ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ