ಹಿರಿಯ ಪತ್ರಕರ್ತ ಖಾದ್ರಿ ಅಚ್ಯುತನ್ ನಿಧನ !

Kannada News

30-10-2017 348

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ ಹಾಗೂ ಬೆಂಗಳೂರು ದೂರದರ್ಶನ ಕೇಂದ್ರದ ಸುದ್ದಿ ವಿಭಾಗದ ನಿವೃತ್ತ ನಿರ್ದೇಶಕ ಖಾದ್ರಿ ಎಸ್.ಅಚ್ಯುತನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 73 ವರ್ಷ ವಯಸ್ಸಾಗಿತ್ತು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲ ಕಾಣದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಅಚ್ಯುತನ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಇಂದು ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪತ್ರಿಕೋದ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದ ಅಚ್ಯುತನ್, ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದದ್ದರು.

ಸಂಯುಕ್ತ ಕರ್ನಾಟಕ ದಿನಪತ್ರಿಕೆಯಿಂದ ಪತ್ರಿಕೋದ್ಯಮಕ್ಕೆ ಕಾಲಿಟ್ಟ ಅವರು, ನಂತರ ಭಾರತೀಯ ವಾರ್ತಾ ಸೇವೆ ಸೇರಿ, ಆಕಾಶವಾಣಿ, ದೂರದರ್ಶನ, ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಯೋಜನಾ (ಮಾಸಿಕ), ಕೇಂದ್ರ ಸರ್ಕಾರದ ಪ್ರಕಾಶನ ವಿಭಾಗ, ವಾರ್ತಾ ಶಾಖೆ, ಚಲನಚಿತ್ರ ಪ್ರಮಾಣೀಕರಣ ಸಂಸ್ಥೆಗಳಲ್ಲಿ ಅಚ್ಯುತನ್ ಸೇವೆ ಸಲ್ಲಿಸಿದ್ದರು.

ನಿವೃತ್ತಿಯ ಬಳಿಕ ಉಷಾಕಿರಣ ಪತ್ರಿಕೆಯಲ್ಲಿ ಕೆಲ ಕಾಲ ಕಾರ್ಯ ನಿರ್ವಹಿಸಿದ ಅವರು, ಹಲವು ಪತ್ರಿಕೆಗಳಿಗೆ ಅಂಕಣಗಳನ್ನೂ ಬರೆಯುತ್ತಿದ್ದರು. ಅಚ್ಯುತನ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು, ಮಾಧ್ಯಮ ಸಂಘಟನೆಗಳು ಸಂತಾಪ ಸೂಚಿಸಿವೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Good reporter
  • Mallinath
  • Student