ಕಾಡುಗೋಡಿ ಪೊಲೀಸ್ ಠಾಣೆಗೆ ಮುತ್ತಿಗೆ

corporator muniswamy followers Protest against kadugodi police

02-01-2018 218

ಬೆಂಗಳೂರು: ಕಾಡುಗೋಡಿ ವಾರ್ಡ್ 83ರ ಬಿಜೆಪಿ ಪಾಲಿಕೆ ಸದಸ್ಯ ಮುನಿಸ್ವಾಮಿ ವಿರುದ್ಧ ಮಹಿಳೆಯೊಬ್ಬರು ನೀಡಿರುವ ದೂರಿನ ಹಿನ್ನೆಲೆ, ಅದನ್ನು ವಿರೋಧಿಸಿ, ಪಾಲಿಕೆ ಸದಸ್ಯ ಮುನಿಸ್ವಾಮಿ ನೇತೃತ್ವದಲ್ಲಿ ನೂರಾರು ಜನರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮೇಲಿನ ವೈಷಮ್ಯದಿಂದ ಮಹಿಳೆಯೊಬ್ಬರಿಂದ ನನ್ನ ವಿರುದ್ಧ ದೂರು ಕೊಡಿಸಿದ್ದಾರೆ ಎಂದು ಪಾಲಿಕೆ ಸದಸ್ಯ ಮುನಿಸ್ವಾಮಿ ಅರೋಪಿಸಿದ್ದಾರೆ.

ಸಿದ್ದಾರ್ಥ ನಗರ ರಸ್ತೆಯ ಇಕ್ಕೆಲಗಳಲ್ಲಿ ಅನಧೀಕೃತವಾಗಿ ನಿರ್ಮಿಸಿದ ಕಟ್ಟಡ ಹಾಗೂ ಶೆಡ್ ಗಳ‌ನ್ನು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ತೆರವುಗೊಳಿಸಿದ್ದು ನಿಜ, ಈ ಸಂದರ್ಭದಲ್ಲಿ ಕಿಡಿಗೇಡಿಗಳು ಕಾಮಗಾರಿಯನ್ನು ನಿಲ್ಲಿಸುವ ಉದ್ದೇಶದಿಂದ ಉದ್ದೇಶಪೂರಕವಾಗಿ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ದಾಂಧಲೆ ನಡೆಸಿ ಗೂಂಡಾ ವರ್ತನೆ ಪ್ರದರ್ಶಿಸಿದ್ದರು. ತಮ್ಮ ವಿರುದ್ಧ ದೂರು ನೀಡಿದ ಮಹಿಳೆಗೆ ಅಮ್ಮ ಎಂಬ ಪದವನ್ನು ಬಿಟ್ಟು ಬೇರೆ ಪದ ಬಳಸಿ ಮಾತನಾಡಿಲ್ಲ, ಘಟನೆ ನಡೆದ ಸಂದರ್ಭದಲ್ಲಿ ಕಾಡುಗೋಡಿ ಪೊಲೀಸರು ಸ್ಥಳದಲ್ಲಿದ್ದು, ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರ ವಿರುದ್ಧವೇ ಆರೋಪಿಸಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಏಜೆಂಟ್ ಕಚೇರಿಗಳಾಗಿದ್ದು, ಮಹಿಳೆ ನೀಡಿದ ದೂರಿನಲ್ಲಿ ಸತ್ಯಾಂಶ ಇಲ್ಲದಿದ್ದರೂ ದೂರು ದಾಖಲಿಸಿಕೊಂಡಿದ್ದಾರೆ ಎಂದು ಮುನಿಸ್ವಾಮಿ ದೂರಿದ್ದಾರೆ.ಸಂಬಂಧಿತ ಟ್ಯಾಗ್ಗಳು

bbmp corporator FIR ವೈಷಮ್ಯ ಪೊಲೀಸ್ ಠಾಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ